ಕಡಬ: ಮದ್ಯದ ನಶೆಯಲ್ಲಿ ಯುವತಿಗೆ ಹೂವಿನೊಂದಿಗೆ ಮೊಬೈಲ್ ನಂಬರ್ ಕೊಟ್ಟ ► ಆರೋಪಿಗೆ ಸಾರ್ವಜನಿಕರಿಂದ ಧರ್ಮದೇಟು

(ನ್ಯೂಸ್ ಕಡಬ) newskadaba.com ಕಡಬ, ಜ.16. ಮದ್ಯಪಾನ ಮಾಡಿದ ವ್ಯಕ್ತಿಯೋರ್ವ ಹೂವು ಹಾಗೂ ತನ್ನ ಮೊಬೈಲ್ ಸಂಖ್ಯೆಯನ್ನು ಚೀಟಿಯಲ್ಲಿ ಬರೆದು ಕೊಟ್ಟು ಯುವತಿಯನ್ನು ಚುಡಾಯಿಸಿ ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ಸೋಮವಾರದಂದು ಕಡಬದಲ್ಲಿ ನಡೆದಿದೆ.

ಕಡಬ ಪರಿಸರದಲ್ಲಿ ಟ್ಯಾಪಿಂಗ್ ಕೆಲಸ ಮಾಡುವ ಕೇರಳದ ಕೊಲ್ಲಂ ನಿವಾಸಿ ಸುಲೈಮಾನ್ ಎಂಬವರ ಪುತ್ರ ನಹಾಝ್(34) ಕಡಬದ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿರುವ ಯುವತಿಗೆ ತನ್ನ ಮೊಬೈಲ್ ಸಂಖ್ಯೆ ಬರೆದು ಹೂವಿನೊಂದಿಗೆ ಕೊಟ್ಟಿದ್ದ. ಯುವತಿ ತಕ್ಷಣವೇ ವಿಷಯವನ್ನು ಸ್ಥಳೀಯರಿಗೆ ತಿಳಿಸಿದಾಗ ಸ್ಥಳೀಯರು ಆರೋಪಿಗೆ ಧರ್ಮದೇಟು‌ ನೀಡಿ ಕಡಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.

Also Read  ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಅಳಕೆಮಜಲು ಕಿರಿಯ ಪ್ರಾಥಮಿಕ ಶಾಲೆಗೆ ಡೆಸ್ಕ್ ವಿತರಣೆ

error: Content is protected !!
Scroll to Top