ಮದುವೆ ವೇದಿಕೆಯಲ್ಲಿ ಹೃದಯಾಘಾತದಿಂದ ವ್ಯಕ್ತಿ ಮೃತ್ಯು.!

(ನ್ಯೂಸ್ ಕಡಬ)Newskadaba.comತ್ತೀಸ್ಗಢ,ಮೇ.11 ಮದುವೆ ಸಂಭ್ರಮದಲ್ಲಿ ಡ್ಯಾನ್ಸ್‌ ಮಾಡುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತ ಸಂಭವಿಸಿ ವೇದಿಕೆಯಲ್ಲಿ ಕುಸಿದು ಬಿದ್ದು  ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ಡೊಂಗರಗಢದಲ್ಲಿ ನಡೆದಿದೆ. ಮೃತರನ್ನು ದಿಲೀಪ್ ರೌಜ್ಕರ್ ಎಂದು ಗುರುತಿಸಲಾಗಿದೆ.ಎಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದ ದಿಲೀಪ್ ರೌಜ್ಕರ್ ಛತ್ತೀಸ್‌ಗಢದ ಬಲೋದ್ ಜಿಲ್ಲೆಯ ನಿವಾಸಿ.

ಅವರು ಇತ್ತೀಚೆಗೆ ತಮ್ಮ ಸಂಬಂಧಿಕರೊಬ್ಬರ ಮದುವೆಗೆ ಹೋಗಿದ್ದು, ಅಲ್ಲಿ ತನ್ನ ಆತ್ಮೀಯರೊಂದಿಗೆ ಮದುವೆ ವೇದಿಕೆಯಲ್ಲಿ ಡ್ಯಾನ್ಸ್‌ ಮಾಡಿದ್ದಾರೆ. ಬಹಳ ಸಂತಸದಿಂದ ಭಿನ್ನ – ವಿಭಿನ್ನವಾಗಿ ಹಾಡಿಗೆ ಹೆಜ್ಜೆ ಹಾಕಿದ ಅವರು ಸುಸ್ತಾಗಿ ವೇದಿಕೆಯಲ್ಲೇ ಕೂತಿದ್ದಾರೆ. ಇದಾದ ಕೆಲವೇ ಸೆಕೆಂಡ್‌ ಗಳಲ್ಲಿ ಕೂತಲೇ ಕುಸಿದು ಬಿದ್ದಿದ್ದಾರೆ.ಕುಸಿದ ದಿಲೀಪ್‌ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

Also Read  ಸೆ. 21ರಿಂದ ಕಿರಿಯ ವೈದ್ಯರಿಂದ ತುರ್ತು ಸೇವೆ ಆರಂಭಿಸಲು ನಿರ್ಧಾರ

 

 

 

error: Content is protected !!
Scroll to Top