ಮಂಗಳೂರು: ಮತದಾನದೋತ್ತರ ಘರ್ಷಣೆ ➤ 5 ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.11. ಮತದಾನದ ಮುಗಿದ ಬಳಿಕ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಾವೂರು, ಸುರತ್ಕಲ್ ಬಜ್ಪೆ, ಮೂಡುಬಿದಿರೆ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕಾನೂನು ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಮೇ.10 ರ ರಾತ್ರಿಯಿಂದ ಮೇ 14ರ ಬೆಳಗ್ಗೆ 6ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಆದೇಶ ಹೊರಡಿಸಿದ್ದಾರೆ.

Also Read  ಮಂಗಳೂರು: ಮನೆಮೇಲೆ ಬೃಹತ್ ಮರಬಿದ್ದು ಮನೆಗೆ ಸಂಪೂರ್ಣ ಹಾನಿ ➤ ಮೂವರಿಗೆ ಗಾಯ

 

error: Content is protected !!
Scroll to Top