ಇವಿಎಂ ಯಂತ್ರಗಳನ್ನು ಮರೆತು ಬಿಟ್ಟುಹೋದ ಅಧಿಕಾರಿಗಳು➤ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ.!*

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಮೇ.11 ಅತ್ಯಂತ ಜಾಗರೂಕತೆಯಿಂದ ನಡೆಯಬೇಕಾದ ಚುನಾವಣೆಯಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ಅದರಲ್ಲೂ ಬಹುಮುಖ್ಯವಾದ ಇವಿಎಂ ಯಂತ್ರಗಳನ್ನೇ ಮತದಾನದ ಬಳಿ ಮರೆತು ಬಿಟ್ಟುಹೋದ ಪ್ರಸಂಗ ನಡೆದಿದೆ.

ಚಿಕ್ಕಮಗಳೂರು ನಗರದ ಪೆನ್ಷನ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದೆ.ಮತದಾನ ಮುಗಿದ ಬಳಿಕ ಮರಳುವಾಗ ಇವಿಎಂ ಯಂತ್ರಗಳನ್ನು ಅಧಿಕಾರಿಗಳು ಮರೆತು ಕಾಲೇಜಿನಲ್ಲೇ ಬಿಟ್ಟುಹೋಗಿದ್ದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕಾಲೇಜಿನಲ್ಲಿ 168 ಹಾಗೂ 169ನೇ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಮತದಾನದ ಬಳಿಕ 169ರ ಮತಗಟ್ಟೆಯಲ್ಲಿನ ಯಂತ್ರಗಳನ್ನು ತೆಗೆದುಕೊಂಡು ಹೋಗಿದ್ದ ಅಧಿಕಾರಿಗಳು, 168ರಲ್ಲಿನ ಯಂತ್ರಗಳನ್ನು ಬಿಟ್ಟುಹೋಗಿದ್ದರು. ನಂತರ ಈ ಮತಯಂತ್ರಗಳನ್ನು ಕಂಡ ಪಕ್ಷಗಳ ಏಜೆಂಟರು, ಸ್ಥಳೀಯರು ಚುನಾವಣಾ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read  ಕಾರಿಗೆ ಜೀಪ್ ಢಿಕ್ಕಿ- ಪ್ರಯಾಣಿಕರು ಅಪಾಯದಿಂದ ಪಾರು

 

error: Content is protected !!
Scroll to Top