ಬಿಜೆಪಿ ಶಾಸಕ ಸಿ.ಟಿ.ರವಿ ದಿಢೀರ್‌ ಆಸ್ಪತ್ರೆಗೆ ದಾಖಲು.!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಮೇ.11 ದಿಢೀರ್ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಚಿಕ್ಕಮಗಳೂರಿನ ಶಾಸಕ ಸಿ.ಟಿ. ರವಿ ಅವರು ದಿಢೀರ್‌ ತಡರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಿಡ್ನಿ ಸಮಸ್ಯೆಯಿಂದ ಬಳುತ್ತಿದ್ದ ಕಾರಣ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರನ್ನು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ‌ದಾಖಲಿಸಲಾಗಿದೆ. ವಿಧಾನಸಭೆ ಚುನಾವಣೆ ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು. ಆದರೆ ತಡರಾತ್ರಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಆಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ದೊರಕಿದೆ.

Also Read  ಕದ್ರಿ ಪಾರ್ಕ್‍ನಲ್ಲಿ ಮಾವು ಮೇಳ

 

 

 

error: Content is protected !!
Scroll to Top