ಆಟವಾಡುವಾಗ ಬಾವಿಗೆ ಬಿದ್ದು 3 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಕೊಡಗು, ಮೇ.11. ತೆರೆದ ಬಾವಿಗೆ ಬಿದ್ದು ಮೂರು ವರ್ಷದ ಮಗು ದುರಂತ ಸಾವಿಗೀಡಾಗಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ.

ರೋಶನ್ ಎಂಬುವರ ಪುತ್ರಿ ಸಿಯಾನ್ (3) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಬಲೂನ್ ಜತೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಮಗು ತೆರೆದ ಬಾವಿಗೆ ಬಿದ್ದು ದುರ್ಘಟನೆ ಸಂಭವಿಸಿದೆ.

 

Scroll to Top