(ನ್ಯೂಸ್ ಕಡಬ)newskadaba.com ಕಲಬುರ್ಗಿ, ಮೇ.11. ಬಿಜೆಪಿ ಕಾರ್ಯಕರ್ತ ರಾಮು ರಾಥೋಡ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ 45 ವರ್ಷದ ರಾಮು ರಾಥೋಡ್ ಶವ ಪತ್ತೆಯಾಗಿದೆ. ಪೋಲಿಂಗ್ ಬೂತ್ ಏಜೆಂಟ್ ಆಗಿ ಕೆಲಸ ಮಾಡಿದ್ದ ರಾಮು ರಾಥೋಡ್ ತಾಂಡಾ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಚಿಂಚೋಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.