ಕಾರು ಮತ್ತು ಟಿಟಿ ವಾಹನದ ನಡುವೆ ಭೀಕರ ಅಪಘಾತ.!➤ಇಬ್ಬರು ಮೃತ್ಯು

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು ,ಮೇ.11 ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಮತ್ತಿಘಟ್ಟ ಕ್ರಾಸ್ ಬಳಿ ನಡೆದಿದೆ.ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.ಕಾರಿನಲ್ಲಿದ್ದ ಗಿರಿಧರ (46) ಹಾಗೂ ಮೂರು ವರ್ಷದ ಮಗು ಮಯಂಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೊನ್ನಾವರದ ಸಂಬಂಧಿಕರ ಮನೆಗೆ ಮದುವೆಗೆಂದು ಗಿರಿಧರ ಕುಟುಂಬ ಕಾರಿನಲ್ಲಿ ತೆರಳುತ್ತಿತ್ತು. ಈ ವೇಳೆ ಕೇರಳದಿಂದ ಚಿಕ್ಕಮಗಳೂರು ಕಡೆ ಪ್ರವಾಸಕ್ಕೆ ತೆರಳುತ್ತಿದ್ದ ಟಿಟಿ ವಾಹನಕ್ಕೆ ಕಾರು ಡಿಕ್ಕಿಯಾಗಿದೆ. ಟಿಟಿ ವಾಹನದಲ್ಲಿದ್ದ 7 ಜನರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಅ.28ರಂದು ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ

 

error: Content is protected !!
Scroll to Top