ಮೇ. 13ರಂದು ಮತ ಎಣಿಕೆಯ ಹಿನ್ನೆಲೆ ➤ ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ. 11. ಮೇ. 10ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಮೇ 13 ರ ಶನಿವಾರದಂದು ನಡೆಯಲಿರುವ ಹಿನ್ನೆಲೆ ದ.ಕ. ಜಲ್ಲೆಯಲ್ಲಿ 144 ಸೆಕ್ಷನ್‌ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಎಮ್‌ ಆರ್‌ ರವಿ ಕುಮಾರ್‌ ಆದೇಶ ಹೊರಡಿಸಿದ್ದಾರೆ.

ಮೇ 13ರ ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್‌ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ವಿಧಿಸಿ ಆದೇಶ ಹೊರಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Also Read  ಸಮಾಜ ಸೇವೆಯನ್ನು ಗುರುತಿಸಿ ಡಾಕ್ಟರೇಟ್ ಪದವಿಗೆ ಆಯ್ಕೆಯಾದ ಸುಳ್ಯದ ಬಶೀರ್ ಆರ್.ಬಿ..!

error: Content is protected !!
Scroll to Top