ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಪ್ರಕರಣ.!➤ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ FIR ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ದ ಪ್ರಕರಣದಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್ ಸೇರಿದಂತೆ ನಾಲ್ವರ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.’ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಬೆಂಗಳೂರು ಪ್ರಾದೇಶಿಕ ಕಚೇರಿಯ ಇನ್‌ಸ್ಪೆಕ್ಟರ್ ಎ.ವಿ. ವೆಂಕಟೇಶ್ ಮೂರ್ತಿ ಅವರು ದೂರು ನೀಡಿದ್ದಾರೆ.

ನಕಲಿ ಜಾತಿ ಪ್ರಮಾಣ ಪತ್ರ ಪಡೆದಿದ್ದ ಡಿ.ಎಂ. ವಾಗೀಶ್, ಪತ್ರ ಪಡೆಯಲು ಸಹಕರಿಸಿದ್ದ ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್, ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅವರಿಗೆ ನೋಟಿಸ್ ನೀಡಿ, ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.

Also Read  ಬೆಂಗಳೂರು: ಶಾಸಕ ಎಸ್.ಅಂಗಾರ ಅವರ ನೂತನ ಕಛೇರಿ ಶುಭಾರಂಭ

 

 

error: Content is protected !!