ಸೌಹಾರ್ದ ವಾತಾವರಣ ನಿರ್ಮಿಸದ ತಂದೆಗೆ ಮಗಳನ್ನು ತನ್ನ ಸುಪರ್ದಿಗೆ ಕೇಳುವ ಹಕ್ಕಿಲ್ಲ.!➤ಹೈಕೋರ್ಟ್ ಆದೇಶ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ಒಂಬತ್ತು ವರ್ಷ ಮಗಳಿಗೆ ಅನುಕೂಲಕರ ವಾತಾವರಣ ನಿರ್ಮಿಸದ ತಂದೆಗೆ ಮಗಳನ್ನು ತನ್ನ ಸುಪರ್ದಿಗೆ ಕೇಳುವ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.ಮಗಳನ್ನು ತಂದೆ ಮತ್ತು ತಾಯಿಯೊಂದಿಗೆ ಸಮಾನವಾಗಿ ನೆಲೆಸುವುದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕೋರಿ ತಂದೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ಪತಿಯ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಪೀಠ, 9 ವರ್ಷದ ಹೆಣ್ಣು ಮಗುವಿಗೆ ಸೌರ್ಹಾದಯುತ ವಾತಾವರಣ ನಿರ್ಮಸಲು ಸಾಧ್ಯವಾಗದ ತಂದೆ ಮಗುವನ್ನು ವಶಕ್ಕೆ ಕೇಳುವುದಕ್ಕೆ ಅರ್ಹರಿರುವುದಿಲ್ಲ. ಹಾಗಾಗಿ ಹೆಣ್ಣು ಮಗು ತಾಯಿಯೊಂದಿಗೆ ಇರಬೇಕಾಗುತ್ತದೆ ಎಂದು ಪೀಠ ಅಭಿಪ್ರಾಯ ಪಟ್ಟಿದೆ.

Also Read  ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

 

error: Content is protected !!
Scroll to Top