(ನ್ಯೂಸ್ ಕಡಬ)Newskadaba.com ಕಾರ್ಕಳ,ಮೇ.12 ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ಕಾರ್ಕಳ ಅಗ್ನಿಶಾಮಕ ದಳದ ತಂಡ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾಕರ್ಳದಲ್ಲಿ ನಡೆದಿದೆ. ಕಾರ್ಕಳ ತಾಲೂಕು ಕಚೇರಿ ಸಮೀಪದ ಬಂಗ್ಲೆಗುಡ್ಡೆ ಕೆಎಂಇಎಸ್ ಶಾಲೆ ಎದುರಿನ ನಿವಾಸಿ 33 ವರ್ಷದ ನಸೀಬಾ ಬಾನು ಬಾವಿಗೆ ರಕ್ಷಣೆಗೆ ಒಳಪಟ್ಟ ಮಹಿಳೆಯಾಗಿದ್ದಾರೆ.
