ಮಗು ಕಿಡ್ನ್ಯಾಪ್ ಆಗಿದೆ ಎಂದು ದೂರು ನೀಡಿದ ಪೋಷಕರು➤ಹುಡುಕಾಟ ನಡೆಸಿದ ಪೊಲೀಸರಿಗೆ ಶಾಕ್ !*

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ಕೆ.ಆರ್.ಪುರಂ ಬಳಿಯ ಜನತಾ ಕಾಲೋನಿಯ ನಿವಾಸಿಗಳಾದ ಮೀನಾ ದಂಪತಿ ಪೊಲೀಸ್ ಠಾಣೆಗೆ ಆಗಮಿಸಿ ತಮ್ಮ ಆರು ವರ್ಷದ ಮಗಳ ಅಪಹರಣ ಆಗಿದೆ ಎಂದು ದೂರು ದಾಖಲಿಸಿದ್ದರು.ಮನೆ ಮುಂದೆ ಆಟವಾಡುತ್ತಿದ್ದ ಮಗಳು ಕಾಣೆಯಾಗಿದ್ದಾಳೆ ಎಂದು ದೂರಿನಲ್ಲಿ ಮೀನಾ ದಂಪತಿ ಉಲ್ಲೇಖಿಸಿದ್ದರು.

ಪ್ರಕರಣ ದಾಖಲಿಸಿಕೊಂಡು ಕಾರ್ಯಪ್ರವೃತ್ತರಾದ ಪೊಲೀಸರು ಮಗುವಿನ ಹುಡುಕಾಟಕ್ಕೆ ಮುಂದಾಗಿದ್ದರು. ಸಬ್ ಇನ್​​ಸ್ಪೆಕ್ಟರ್ ರಮ್ಯಾ ಹಾಗೂ ಸಿಬ್ಬಂದಿ ಮಗುವಿಗಾಗಿ ಎಲ್ಲಾ ಕಡೆ ಹುಡುಕಾಟ ನಡೆಸಿದ್ರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ನಂತರ ಮಗು ಕಾಣೆಯಾಗಿದೆ ಎನ್ನಲಾದ ಸ್ಥಳಕ್ಕೆ ಅಂದ್ರೆ ಮೀನಾ ದಂಪತಿ ನಿವಾಸಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದಾಗ ಮನೆಯಲ್ಲಿಯೇ ಮಗು ಪತ್ತೆಯಾಗಿದೆ.

Also Read  ಡ್ರಗ್ಸ್ ಜಾಲದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಅರೇಸ್ಟ್

 

 

 

error: Content is protected !!
Scroll to Top