(ನ್ಯೂಸ್ ಕಡಬ) newskadaba.com.ಕಾವೂರು, ಮೇ.12. ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೆಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಬಂಧಿತರು. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಘಟನೆಗೆ ಸಂಬಂಧಿಸಿ ಐದು ಎಫ್ ಐ ಆರ್ ದಾಖಲಿಸಿದ್ದು, ಕೃತ್ಯದಲ್ಲಿ ಭಾಘಿಯಾದ ಇತರ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.
ಮತದಾನದ ಬಳಿಕ ಮೂಡುಶೆಡ್ಡೆಯ ಮತಗಟ್ಟೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಡ ನಡೆದಿತ್ತು. ಘಟನೆಯ ನಂತರ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದರು, ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.