ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ➤ ಇಂದು ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ)Newskadaba.com ಮಂಗಳೂರು, ಮೇ.13. ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ದ.ಕ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಎಮ್. ಆರ್. ರವಿ ಕಮಾರ್ ಆದೇಶ ಹೊರಡಿಸಿದ್ದಾರೆ.

ಮೇ 13 ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ವಿಜಯೋತ್ಸವ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಾರ್ವಜನಿಕವಾಗಿ ಚೂರಿ ಇನ್ನಿತರ ಆಯುಧಗಳನ್ನು ತೆಗೆದುಕೊಂಡು ಹೋಗುವುದು, ಸಾರ್ವಜನಿಕ ಸಮಾರಂಭ ಪ್ರತಿಭಟನೆ ನಡೆಸುವುದು ಎಲ್ಲವನ್ನು ನಾಳೆ ದ.ಕ ಜಿಲ್ಲೆಯಾದ್ಯಂತ ಸಂಪೂರ್ಣ ನಿಷೇದಿಸಲಾಗಿದೆ.

Also Read  ತನ್ನ ಕಾರು ಬೈಕಿಗೆ ಢಿಕ್ಕಿ ಹೊಡೆದರೂ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸದ ಶಾಸಕ ➤ ನೀನ್ಯಾವ ಸೀಮೆ ಎಂಎಲ್'ಸಿ ಎಂದು ತರಾಟೆಗೆತ್ತಿದ ಸ್ಥಳೀಯರು

ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ವಿಧಿಸಿ ಆದೇಶ ಹೊರಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 

error: Content is protected !!
Scroll to Top