ಕನಕಪುರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್..!

(ನ್ಯೂಸ್ ಕಡಬ) newskadaba.com ರಾಮನಗರ, ಮೇ. 13. ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್ ಅವರು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ನ ಬಿ.ನಾಗರಾಜು ಮತ್ತು ಬಿಜೆಪಿ ಮುಖಂಡ ಹಾಗೂ ಸಚಿವ ಆರ್.ಅಶೋಕ್ ವಿರುದ್ಧ 20,500ಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದರು.

ಮೇ. 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಜೆಡಿಎಸ್ ಜೊತೆಗೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಹೋರಾಟಕ್ಕೆ ಸಾಕ್ಷಿಯಾಗಿದ್ದು, ಅತಂತ್ರ ವಿಧಾನಸಭೆಯ ಸಾಧ್ಯತೆಯ ಬಗ್ಗೆ ತಮ್ಮ ಹಣೆಬರಹವನ್ನು ತಿಳಿಯಲು ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಕರ್ನಾಟಕದಲ್ಲಿ ಅಧಿಕಾರವನ್ನು ಭದ್ರಪಡಿಸಿಕೊಳ್ಳಲು ಬಯಸುವ ಯಾವುದೇ ಪಕ್ಷವು 112 ರ ಅರ್ಧದಷ್ಟು ದಾಟಬೇಕಾಗುತ್ತದೆ. ಡಿ.ಕೆ.ಶಿವಕುಮಾರ್ 25,406, ಬಿ.ನಾಗರಾಜು 4,898, ಆರ್.ಅಶೋಕ್ 3,813 ಮತಗಳನ್ನು ಪಡೆದಿದ್ದಾರೆ.

Also Read  ಪಟಾಕಿ ಮದ್ದು ಸೇವಿಸಿ ಬಾಲಕ ಮೃತ್ಯು.!

error: Content is protected !!
Scroll to Top