ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾವ ನಿಧನ

 (ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.13. ಕಾಂಗ್ರೆಸ್ ಗೆಲುವಿನ ನಡುವೆಯೂ ಸಿದ್ದರಾಮಯ್ಯ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾವ ನಿಧನರಾಗಿದ್ದಾರೆ.

ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಪತಿ ಸಾವನ್ನಪ್ಪಿದ್ದು, ರಾಮೇಗೌಡ (69) ವರ್ಷ ಮೃತ ವ್ಯಕ್ತಿ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.  ರಾಮೇಗೌಡ ತಮ್ಮ ಪತ್ನಿ, ಮೂವರು ಹೆಣ್ಣು ಮಕ್ಕಳು, ಓರ್ವ ಮಗನನ್ನು ಅಗಲಿದ್ದಾರೆ. ಸಂಜೆ ವೇಳೆಗೆ ಸಿದ್ದರಾಮನಹುಂಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Scroll to Top