(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ.16. ಹಜ್ ಯಾತ್ರಾರ್ಥಿಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಪ್ರಸಕ್ತ ವರ್ಷದಿಂದ ಕೇಂದ್ರ ಸರಕಾರ ರದ್ದುಪಡಿಸಿದೆ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಕ್ವಿ ಮಂಗಳವಾರ ಹೇಳಿದ್ದಾರೆ.
ಸ್ವಾತಂತ್ರ್ಯಾ ನಂತರ ಪ್ರಪ್ರಥಮ ಬಾರಿಗೆ 1.75 ಲಕ್ಷ ಹಜ್ ಯಾತ್ರಾರ್ಥಿಗಳು ಸಬ್ಸಿಡಿಯಿಲ್ಲದೆ ಹಜ್ ಯಾತ್ರೆಗೆ ತೆರಳುತ್ತಿದ್ದಾರೆ. ಸಬ್ಸಿಡಿಯನ್ನು ರದ್ದು ಮಾಡುವ ಮೂಲಕ ಸರಕಾರವು 700 ಕೋಟಿ ರೂ.ಗಳನ್ನು ಉಳಿತಾಯ ಮಾಡಲಿದೆ. ಈ ಹಣವನ್ನು ಅಲ್ಪಸಂಖ್ಯಾತ ಸಮುದಾಯದ, ಮುಖ್ಯವಾಗಿ ಹೆಣ್ಮಕ್ಕಳ ಶಿಕ್ಷಣಕ್ಕಾಗಿ ಬಳಸಲಾಗುವುದು ಎಂದವರು ಹೇಳಿದ್ದಾರೆ.