16 ಮತಗಳ ಅಂತರದಿಂದ ಸೋಲು ➤ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ ಸೌಮ್ಯ ರೆಡ್ಡಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.15. 16 ಮತಗಳ ಅಂತರದಿಂದ ಸೋತ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಕೋರ್ಟ್ಗೆಯ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.


ಈ ಕುರಿತು ಟ್ವೀಟ್ ಮಾಡಿದ ಸೌಮ್ಯ ರೆಡ್ಡಿ, ವಿಧಾನಸಭೆ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವದಿಸಿದ ಜಯನಗರದ ನನ್ನ ಪ್ರೀತಿಯ ಜನತೆಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ನನ್ನ ಬೆನ್ನೆಲುಬಾಗಿ ನಿಂತ ನಾಯಕರಿಗೆ ಅನಂತ ಧನ್ಯವಾದಗಳು. ಕಷ್ಟದ ಸಂದರ್ಭದಲ್ಲಿ ಒಗ್ಗಟ್ಟು ಪ್ರದರ್ಶಿಸಿ ನನ್ನ ಜೊತೆ ನಿಂತ ಸಾವಿರಾರು ಜನರಿಗೆ ಇದೇ ಸಂದರ್ಭದಲ್ಲಿ ನಮನಗಳನ್ನು ಸಲ್ಲಿಸುತ್ತೇನೆ. ಫಲಿತಾಂಶ ಪ್ರಕಟಣೆ ಸಂದರ್ಭದಲ್ಲಿ ನಡೆದಂತಹ ಮೋಸ ಹಾಗೂ ಪ್ರಜಾಪ್ರಭುತ್ವದ ಕಗ್ಗೊಲೆ ವಿರುದ್ಧ ಹೋರಾಡಲು ನಿಮ್ಮ ಬೆಂಬಲವನ್ನು ನಾನು ಕೈಮುಗಿದು ಕೋರುತ್ತಿದ್ದೇನೆ ಎಂದು ಹೇಳಿದ್ದಾರೆ.

Scroll to Top