ಬೆಳ್ತಂಗಡಿ: ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.15. ಉಜಿರೆ ಟೆಲಿಪೋನ್ ಎಕ್ಸ್ ಚೇಂಜ್ ಟರ್ ಬಳಿ ವ್ಯಕ್ತಿಯೊಬ್ಬರ ಮೃತದೇಹದ ಪಕ್ಕದಲ್ಲಿದ್ದ ಚೀಲದಲ್ಲಿ 6.65 ಲಕ್ಷ ನಗದು ಪತ್ತೆಯಾಗಿದೆ.


ತಮ್ಮಯ್ಯ (55) ಮಡಿಕೇರಿಯ ಕುಶಾಲನಗರ ಮೂಲದ ವ್ಯಕ್ತಿಯಾಗಿದ್ದು, ಇವರು ಹಲವು ವರ್ಷಗಳಿಂದ ಉಜಿರೆಯಲ್ಲಿ ವಾಸಿಸುತ್ತಿದ್ದರು. ಅವರು ಬಸ್‌ ನಿಲ್ಡಾಣ, ಅಂಗಡಿಗಳು ಮುಚ್ಚಿದಾಗ ಅವುಗಳ ಮುಂಭಾಗದಲ್ಲಿ, ಬಿಎಸ್ಎನ್ಎಲ್ ಕಚೇರಿ ಪಕ್ಕದಲ್ಲಿ ವಸತಿ ಹೂಡಿ ದಿನ ಕಳೆಯುತ್ತಿದ್ದರು.
ಈ ಘಟನೆ ಬಗ್ಗೆ ಕುಟುಂಬದಲ್ಲಿ ಯಾರಿಗೂ ತಿಳಿದಿಲ್ಲ. ಇವರ ಮೃತದೇಹ ಟೆಲಿಪೋನ್ ಎಕ್ಸ್ ಚೇಂಜ್ ಟರ್ ಬಳಿ ಪತ್ತೆಯಾಗಿದ್ದು, ಈ ಬಗ್ಗೆ ಉಜಿರೆ ಬೆಳಾಲು ಘಟಕದ ಶೌರ್ಯ ವಿಪತ್ತು ತಂಡ ತಕ್ಷಣ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Also Read  ಪೇಜಾವರ ಶ್ರೀ ಆರೋಗ್ಯ ಸ್ಥಿತಿ ಗಂಭೀರ

error: Content is protected !!
Scroll to Top