(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.15 ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಕಠಿಣವಾಗಿದ್ದು, ಆರೋಪಿ ಮೇಲೆ ಗಂಭೀರ ಪರಿಣಾಮ ಬೀರುವಂಥದ್ದಾಗಿದೆ. ಹೀಗಾಗಿ, ಯಾವುದೇ ದೂರಿಗೆ ಸಂಬಂಧಿಸಿ ವಾಸ್ತವಾಂಶಗಳನ್ನು ಪರ್ಯಾಲೋಚಿಸದೇ ಯಾಂತ್ರಿಕವಾಗಿ ಈ ಕಾಯ್ದೆಯಡಿ ಪ್ರಕರಣ ದಾಖಲಿಸಬಾರದು ಎಂದು ಸುಪ್ರೀಂಕೋರ್ಟ್ ಪೊಲೀಸರಿಗೆ ಸೂಚಿಸಿದೆ.
ಅರ್ಜಿಯೊಂದರ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ದಿನೇಶ್ ಮಾಹೇಶ್ವರಿ ಹಾಗೂ ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ನ್ಯಾಯಪೀಠ, ‘ತಮ್ಮ ಮುಂದಿರುವ ಪ್ರಕರಣಕ್ಕೆ ಕಾಯ್ದೆಯ ನಿಬಂಧನೆಗಳು ಮೇಲ್ನೋಟಕ್ಕೆ ಅನ್ವಯವಾಗುತ್ತವೆ ಎಂಬುದು ಸಂಬಂಧಪಟ್ಟ ಅಧಿಕಾರಿಗೆ ಮನದಟ್ಟಾಗಬೇಕು’ ಎಂದು ಹೇಳಿದೆ.