ಪುತ್ತೂರು: ಬಿಜೆಪಿ ನಾಯಕರ ಫೋಟೋಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ➤ ಚಪ್ಪಲಿ ಹಾರ ಹಾಕಿ ಬ್ಯಾನರ್ ಅಳವಡಿಕೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.15. ಬಿಜೆಪಿ ನಾಯಕರ ಫೋಟೋ ಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು, ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.


ಬಿಜೆಪಿ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ, ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿದೆ.

Scroll to Top