ಅಕ್ರಮ ಮರಳುಗಾರಿಕೆಯ ವಿರುದ್ಧ ಮುಂದುವರಿದ ಕಾರ್ಯಾಚರಣೆ ► ಬೃಹತ್ ಅಕ್ರಮ ಮರಳು ದಾಸ್ತಾನು ಪತ್ತೆ, 5 ಘಟಕಗಳಿಗೆ ಬೀಗ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.17. ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಗಳಲ್ಲಿ ಅಕ್ರಮ ಮರಳು ಸಾಗಣೆ ದಂಧೆ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಜಿಲ್ಲಾಡಳಿತ 800ಕ್ಕೂ ಹೆಚ್ಚು ಲೋಡ್ ಮರಳು, ಯಂತ್ರ ಮತ್ತು ಹಲವಾರು ಲಾರಿಗಳನ್ನು ವಶಪಡಿಸಿಕೊಂಡಿದೆ.

ಮಂಗಳೂರು ತಾಲ್ಲೂಕಿನ ಮರವೂರು ಡ್ಯಾಂ ಬಳಿ ಇದ್ದ ಐದು ಮರಳು ತೆಗೆಯುವ ಘಟಕಗಳನ್ನು ಪತ್ತೆ ಮಾಡಲಾಗಿದ್ದು, ಅವುಗಳಿಗೆ ಬೀಗ ಜಡಿಯಲಾಗಿದೆ. ಅಲ್ಲದೇ ಮರಳು ಕಳ್ಳಸಾಗಣೆಗೆ ಬಳಸುತ್ತಿದ್ದ 40 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನೇತೃತ್ವದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಕ್ರಮ ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

Also Read  Регистрация в казино — Демо слоты бесплатно, демо слоты казино

error: Content is protected !!
Scroll to Top