ಬಂಟ್ವಾಳ: ಅನಾರೋಗ್ಯದಿಂದ ಹಿಂದೂ ಸಂಘಟನೆಯ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.15. ಲಿವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ರೂಪೇಶ್ ಯಾನೆ ನಿತಿನ್ ಪೂಜಾರಿ(೩೦) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.‌ ಅವರಿಗೆ ಹೊಟ್ಟೆ ನೋವು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Scroll to Top