(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.15. 2023ರ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ. 15 ರ ಕೊನೆಯ ದಿನವಾಗಿದೆ.
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಮೇ.15 ರವರೆಗೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರು ಛಾಯಾಪ್ರತಿಯನ್ನು ಪಡೆಯಬೇಕು. ನಂತರವಷ್ಟೇ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕು. ಮರು ಎಣಿಕೆ ಉಚಿತವಾಗಿರುತ್ತದೆ.
