ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ➤ ಇಬ್ಬರು ಮಹಿಳೆಯರಿಗೆ ಗಾಯ

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.15. ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಂದು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ.


ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂದಿನಿಂದ ಬಂದ ಸ್ಕಾರ್ಪಿಯೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇನ್ನು ಘಟನೆಯಲ್ಲಿ ಆಲ್ಟೋ ಕಾರಿನಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!
Scroll to Top