ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗುತ್ತೆ..!➤ ಶ್ರೀ ದಿಂಗಾಲೇಶ್ವರ ಸ್ವಾಮೀಜಿ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ,ಮೇ.15  ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗತ್ತೆ ಅಂತ ನಾನು ಈ ಹಿಂದೆ ಹೇಳಿದ್ದೆ. ಈಗ ಆ ಪಕ್ಷದ ನಾಯಕರಿಗೆ ಇದು ಅರಿವಾಗಿದೆ. ಅಧಿಕಾರ ಬಂದ ಸಂದರ್ಭದಲ್ಲಿ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೇ ತಿನ್ನಬಾರದ ಪೆಟ್ಟು ತಿಂತಾರೆ.

ನಾನು ಅವತ್ತು ಒಬ್ಬ ವ್ಯಕ್ತಿಯನ್ನು ಉದ್ದೇಶಿಸಿ ಮಾತನಾಡಿರಲಿಲ್ಲ. ಬಿ.ಎಸ್​​ ಯಡಿಯೂರಪ್ಪ ಅವರು ಎಲ್ಲರಿಗೂ ಬೇಕಾದ ನಾಯಕರು. ಅವತ್ತು ಎಲ್ಲ ಸಮಾಜದ ನಾಯಕರು ಬಿ.ಎಸ್​ ಯಡಿಯೂರಪ್ಪ ಅವರನ್ನು ಮುಂದುವರೆಸಬೇಕು ಎಂದಿದ್ದರು. ಯಾವುದೋ ಕೆಟ್ಟ ಉದ್ದೇಶ, ಅಥವಾ ಸ್ವಾರ್ಥಕ್ಕೆ ತಗೆದುಕೊಂಡ ನಿರ್ಣಯ ಇಂದಿನ ಹೀನಾಯ ಪರಿಸ್ಥಿಗೆ ಕಾರಣ ಎಂದು ಶಿರಹಟ್ಟಿಯ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.

Also Read  ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಓಪನ್ ➤ ನಿಯಮ ಪಾಲನೆ ಕಡ್ಡಾಯ

 

 

error: Content is protected !!
Scroll to Top