ಬಿಜೆಪಿ ಅಭ್ಯರ್ಥಿ ಸಚಿವ ಡಾ.ಸುಧಾಕರ್ ಸೋಲಿನ ಹಿನ್ನೆಲೆ➤ಆತ್ಮಹತ್ಯೆಗೆ ಶರಣಾದ ಅಭಿಮಾನಿ.!

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ,ಮೇ.15 ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಸಚಿವ ಡಾ.ಸುಧಾಕರ್ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹೀನಾಯವಾಗಿ ಸೋಲನುಭವಿಸಿದ್ದಾರೆ. ಇದರಿಂದ ಮನನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಚಿತ್ತಾರ ವೆಂಕಟೇಶ್ ಎಂಬ ಅಂಧ ಅಭಿಮಾನಿ ಸಚಿವ ಸುಧಾಕರ್ ಸೋತಿರುವ ಕಾರಣಕ್ಕೆ ಬೇಸರಗೊಂಡು ವಡ್ರೆಪಾಳ್ಯದಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೋಟೆ ನಿವಾಸಿಯಾಗಿರುವ ವೆಂಕಟೇಶ್, ಸುಧಾಕರ್ ಅವರ ಕಟ್ಟಾ ಅಭಿಮಾನಿಯಾಗಿದ್ದ. ಇದೀಗ ಸುಧಾಕರ್ ಸೋಲಿನ ಹಿನ್ನೆಲೆಯಲ್ಲಿ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Also Read  ವಾಟ್ಸಾಪ್ ಚಾನೆಲ್ ಆರಂಭಿಸಿದ ಮೊದಲ ಸಿಎಂ ಸಿದ್ದರಾಮಯ್ಯ

 

 

 

error: Content is protected !!
Scroll to Top