ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಮೃತ್ಯು.!



(ನ್ಯೂಸ್ ಕಡಬ) newskadaba.com  ಕೇರಳ,ಮೇ.15 ಕೇರಳ ರಾಜಧಾನಿ ತಿರುವನಂತಪುರಂನಲ್ಲಿನ ಅಲ್ಪಸಂಖ್ಯಾತ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿ ಸಾವು ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.







ತಿರುವನಂತಪುರಂನ ಮುಸ್ಲಿಂ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಭೀಮಪಲ್ಲಿ ಮೂಲದ 17 ವರ್ಷದ ಬಾಲಕಿ ಶನಿವಾರ ಬಲರಾಮಪುರಂನಲ್ಲಿರುವ ಮುಸ್ಲಿಂ ಧಾರ್ಮಿಕ ಸಂಸ್ಥೆಯ ಗ್ರಂಥಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳು ಎಂದು ಪೊಲೀಸರು ತಿಳಿಸಿದ್ದಾರೆ.






 

 

error: Content is protected !!
Scroll to Top