(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.16. ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಗಣನೀಯ ಇಳಿಕೆಯಾದ ಪರಿಣಾಮ ಬಂಟ್ವಾಳ ನಗರ ವ್ಯಾಪ್ತಿಯಲ್ಲೂ ಕುಡಿಯುವ ನೀರಿನ ಆತಂಕ ಎದುರಾಗಿದ್ದು, ಮಳೆ ಬಂದರೂ ನದಿಯಲ್ಲಿ ನೀರಿನ ಒಳಹರಿವು ಹೆಚ್ಚಾಗದ ಹಿನ್ನೆಲೆಯಲ್ಲಿ ಮುಂದೆ ನೀರಿನ ಅಭಾವ ಉಂಟಾಗುವ ಅಪಾಯವಿದೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಹುತೇಕ ಪ್ರದೇಶಗಳಿಗೆ ನೇತ್ರಾವತಿ ನದಿಯಿಂದ ಜಕ್ರಿಬೆಟ್ಟಿನಲ್ಲಿ ಜಾಕ್‌ವೆಲ್ ಮೂಲಕ ನೀರನ್ನು ಲಿಫ್ಟ್ ಮಾಡಲಾಗುತ್ತಿದ್ದು, ಪ್ರಸ್ತುತ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾದ ಹಿನ್ನೆಲೆಯಲ್ಲಿ ನದಿಯಲ್ಲಿ ಅಲ್ಲಲ್ಲಿ ನಿಂತಿರುವ ನೀರನ್ನು ಜಾಕ್‌ವೆಲ್‌ನ ಬುಡಕ್ಕೆ ಹರಿಸುವ ಕಾರ್ಯ ಮಾಡಲಾಗಿದೆ.