ಮಗಳ ವಿವಾಹ ದಿನದಂದೇ ತಂದೆ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ)newskadaba.com ಕೊಣಾಜೆ, ಮೇ.16. ಬೋಳಿಯಾರ್ ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ. ಮೃತಪಟ್ಟ‌ ವ್ಯಕ್ತಿಯನ್ನು ಬೋಳಿಯಾರ್ ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ(60) ಎಂದು ಗುರುತಿಸಲಾಗಿದೆ.


ಹಸನಬ್ಬ ಅವರ ಮಗಳಿಗೆ ಕಾಸರಗೋಡುವಿನ ಯುವಕನೊಂದಿಗೆ ಹೊಸಂಗಡಿಯ ಸಭಾಂಗಣವೊಂದರಲ್ಲಿ ಮದುವೆ ನಿಗಧಿಯಾಗಿತ್ತು.‌ ದುರದೃಷ್ಟವಶಾತ್ ಹಸನಬ್ಬರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಪಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗದೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಗ್ರಾಮ ಲೆಕ್ಕಿಗ.!➤ಆರೋಪಿ ಆರೆಸ್ಟ್

error: Content is protected !!
Scroll to Top