ಪುತ್ತೂರು: ಬಿಜೆಪಿ ನಾಯಕರ ಶ್ರದ್ಧಾಂಜಲಿ ಬ್ಯಾನರ್ ಪ್ರಕರಣ ➤ ಮತ್ತೆ 7 ಮಂದಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.16. ಪುತ್ತೂರು ಕೆಎಸ್ಆರ್‌‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು ಬಿಜೆಪಿ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಿಜೆಪಿ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ, ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿದೆ.

Also Read  ಪುಣಚದಲ್ಲಿ ರಸ್ತೆ ಅತಿಕ್ರಮಣ ಪ್ರಕರಣ ➤ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಪ್ರತಿಭಟನೆ

error: Content is protected !!
Scroll to Top