ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕ.!➤ ದೂರು ದಾಖಲು



(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ,ಮೇ.17 ಉತ್ತರ ಪ್ರದೇಶದ ಷಹಜಹಾನ್‌ಪುರ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು ಶಿಕ್ಷಕನೊಬ್ಬ ಕನಿಷ್ಠ 18 ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.







ಆರೋಪಿಯನ್ನು ಬೆಂಬಲಿಸಿದ್ದಕ್ಕಾಗಿ ಶಾಲೆಯ ಪ್ರಾಂಶುಪಾಲರು ಮತ್ತು ಸಹಾಯಕ ಶಿಕ್ಷಕನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಎಲ್ಲಾ ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಐಪಿಸಿ ಮತ್ತು ಪೋಕ್ಸ್ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.






 

 

 

error: Content is protected !!
Scroll to Top