(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.17 ಮಯೆನ್ಮಾರ್ ರಖೀನೆ ಪ್ರದೇಶ, ಮೋಚಾ ಚಂಡಮಾರುತದ ಅಬ್ಬರಕ್ಕೆ ಅಕ್ಷರಶಃ ನುಲುಗಿಹೋಗಿದ್ದು, ಪ್ರದೇಶದಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.ಗಂಟೆಗೆ 195 ಕಿ.ಮೀ.ವೇಗದ ಗಾಳಿ ಮಳೆಯ ಪರಿಣಾಮ ಭಾರೀ ಅವಘಡಗಳು ಸಂಭವಿಸಿವೆ.ಮನೆಗಳು, ಮರಗಳು ಮುರಿದುಬಿದ್ದಿವೆ. , 100ಕ್ಕೂ ಅಧಿಕ ಮಂದಿ ಕಾಣೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ಥರ ಸ್ಥಳಾಂತರ ಕಾರ್ಯಾಚರಣೆಯನ್ನೂ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಚಂಡಮಾರುತದಿಂದಾಗಿ ಮರಗಳು ನೆಲಕ್ಕೆ ಉರುಳಿದ್ದು ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿದೆ.ಮತ್ತೊಂದೆಡೆ ಬಾಂಗ್ಲಾ-ಮ್ಯಾನ್ಮಾರ್‌ಗೆ ಅಪ್ಪಳಿಸಿರುವ ಮೋಚಾ, ಭಾರತದ ಮಿಜೋರಾಂನಲ್ಲಿಯೂ ತೀವ್ರತರದ ಪರಿಣಾಮ ಉಂಟುಮಾಡಿದೆ. 236 ಕ್ಕೂ ಅಧಿಕ ಮನೆಗಳು ಮಳೆಯಿಂದಾಗಿ ಹಾನಿಗೊಳಗಾಗಿವೆ. ನಿರಾಶ್ರಿತ ಶಿಬಿರಗಳಲ್ಲಿ ನೀರು ಆವರಿಸಿದ್ದು, ಜನರ ಪರಿಸ್ಥಿತಿ ಅತಂತ್ರವಾಗಿದೆ.