(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.17 ಈರುಳ್ಳಿ ಬೆಲೆ ಏಕಾಏಕಿ ಕುಸಿತವಾಗಿದ್ದು ಈರುಳ್ಳಿ ಬೆಳಗಾರರು ಕಂಗಾಲಾಗಿದ್ದಾರೆ.ಕಳೆದ ವಾರ ಮಳೆಯಾಗಿದ್ದು ವಿಜಯಪುರ ಜಿಲ್ಲೆಯಿಂದ ಈರುಳ್ಳಿ ದೊಡ್ಡ ಪ್ರಮಾಣದಲ್ಲಿ ರಾಜಧಾನಿಯ ಮಾರುಕಟ್ಟೆಗೆ ದಾಸ್ತಾನು ಬಂದಿದೆ. ನಗರದ ಯಶವಂತಪುರ ಹಾಗೂ ದಾಸರಹಳ್ಳಿ ಎಪಿಎಂಸಿಗೆ ಬರುತ್ತಿದೆ.ಹೀಗಾಗೀ ಈರುಳ್ಳಿ ಬೆಲೆ ಇಳಿಕೆಯಾಗಿದೆ.
ಏಕಾಏಕಿ ದುಪ್ಪಟ್ಟು ಪ್ರಮಾಣದಲ್ಲಿ ಈರುಳ್ಳಿ ಬರುತ್ತಿದ್ದು ಕಡಿಮೆ ಗುಣಮಟ್ಟದ ಹೆಚ್ಚು ಈರುಳ್ಳಿ ಬಂದಿರುವ ಕಾರಣಕ್ಕೆ ಬೆಲೆಯೂ ಗಣನೀಯವಾಗಿ ಕಡಿಮೆಯಾಗಿದೆ.ಎಪಿಎಂಸಿಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಕೆ.ಜಿಗೆ 8-10 ರೂ. ಗೆ ಮಾರಾಟವಾಗುತ್ತಿದ್ದು ಕಳಪೆ ಈರುಳ್ಳಿ ಬೆಲೆ 5-8 ದರದಲ್ಲಿ ಹರಾಜು ಹಾಕಲಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಗುಣಮಟ್ಟದ ಈರುಳ್ಳಿಗೆ ಕೆಜಿಗೆ 20 ರೂ. ಗೆ ಮಾರಾಟವಾಗುತ್ತಿದ್ದು ಕಳಪೆ ಈರುಳ್ಳಿಗೆ 10-12 ರೂ. ಮಾತ್ರವೇ ಬೆಲೆಯಿದೆ.