(ನ್ಯೂಸ್ ಕಡಬ) newskadaba.com ಮಂಗಳೂರು, ಜ.17. ಹಜ್ ಯಾತ್ರಿಕರಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರಕಾರ ಸ್ಥಗಿತಗೊಳಿಸಿರುವ ಕ್ರಮವನ್ನು ಸ್ವಾಗತಿಸುವುದಾಗಿ ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಬುಧವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಜ್ ಯಾತ್ರಿಕರಿಗೆ ನೀಡಲಾಗುತ್ತಿದ್ದ ಸಬ್ಸಿಡಿಯಿಂದ ಏರ್ ಇಂಡಿಯಾಕ್ಕೆ ಲಾಭವಾಗುತ್ತಿತ್ತೇ ಹೊರತು ವೈಯಕ್ತಿಕವಾಗಿ ಯಾತ್ರಿಕರಿಗೆ ಯಾವುದೇ ಲಾಭ ಇರಲಿಲ್ಲ. ಸಬ್ಸಿಡಿಯ ಕಾರಣದಿಂದಾಗಿ ಏರ್ ಇಂಡಿಯಾದಲ್ಲೇ ಯಾತ್ರಿಕರು ಪ್ರಯಾಣಿಸುವುದು ಕಡ್ಡಾಯವಾಗಿತ್ತು. ಆದರೆ ಇದೀಗ ಕಡಿಮೆ ವೆಚ್ಚದಲ್ಲಿ ಇತರ ವಿಮಾನಗಳಲ್ಲೂ ಹಜ್ ಯಾತ್ರಿಕರು ಪ್ರಯಾಣಿಸಬಹುದಾಗಿದೆ ಎಂದು ಹೇಳಿದರು.