(ನ್ಯೂಸ್ ಕಡಬ)newskadaba.com ಕಾಪು, ಮೇ.17. ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ನ್ಯಾನೊ ಕಾರು ಮತ್ತು ಡಸ್ಟರ್ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಢಿಕ್ಕಿಯ ರಭಸಕ್ಕೆ ಎರಡು ಕಾರು ಪಲ್ಟಿ ಹೊಡೆದಿದ್ದು ನ್ಯಾನೋ ಕಾರಿನಲ್ಲಿದ್ದ ನಾಲ್ವರು ಗಾಯ ಗೊಂಡಿದ್ದಾರೆ. ಡಸ್ಟರ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Also Read ಆರೋಗ್ಯ ಸಮಸ್ಯೆಗಳಿಗೆ ಪರದಾಡುವಂತಹ ಪರಿಸ್ಥಿತಿ ► ಕೊಂಬಾರಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಲು ಆಗ್ರಹ