ಮಂಡ್ಯದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಸಿಕ್ಕಿ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಮಂಡ್ಯ,ಮೇ.17 ಮಂಡ್ಯ ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಮಹಿಳೆ ಪ್ಲಾಟ್‌ಫಾರ್ಮ್ ನಂ 2ರ ಬಳಿ ರೈಲ್ವೆ ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿದ್ದರು ಎಂದು ಹೇಳಲಾಗಿದೆ.

ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅತ್ಯಂತ ವೇಗದಲ್ಲಿ ನಿಲ್ದಾಣವನ್ನು ದಾಟಿತು ಆ ವೇಳೆ ರೈಲು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ವರದಿಗಳು ತಿಳಿಸಿವೆ.

 

 

 

 

Scroll to Top