ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.17. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಆಯ್ಕೆಯಾಗಿದ್ದು, ಎರಡನೇ ಬಾರಿಗೆ ಸಿದ್ದರಾಮಯ್ಯ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿದಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಫೈನಲ್ ಆಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾಹಿತಿ ನೀಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ರಾಹುಲ್ ಗಾಂಧಿಯವರೇ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

Scroll to Top