ಕರಾವಳಿಯಲ್ಲಿ ಕೆಎಸ್ಸಾರ್ಟಿಸಿ ಚಾಲಕ – ನಿರ್ವಾಹಕ‌ರ ಕೊರತೆ ► ಮಂಗಳೂರು, ಪುತ್ತೂರು ವಿಭಾಗಕ್ಕೆ ತಕ್ಷಣವೇ ಸಿಬ್ಬಂದಿಗಳ ನೇಮಕಾತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.17. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಮತ್ತು ಮಂಗಳೂರು ವಿಭಾಗದಲ್ಲಿ ಚಾಲಕರು, ನಿರ್ವಾಹಕರ ಕೊರತೆ ಇರುವುದರಿಂದ ತಕ್ಷಣವೇ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಹೇಳಿದ್ದಾರೆ.

ಪುತ್ತೂರು ಮತ್ತು ಮಂಗಳೂರು ಭಾಗದಲ್ಲಿ ಕರ್ತವ್ಯದಲ್ಲಿ ಇದ್ದವರು ವರ್ಗಾವಣೆ ಕೇಳಿದ್ದಾರೆ. ಕರಾವಳಿಯವರು ಪ್ರಪಂಚದಾದ್ಯಂತ ಕೆಲಸ ಮಾಡ್ತಾರೆ. ಆದರೆ ಅಲ್ಲಿ ಚಾಲಕ, ನಿರ್ವಾಹಕ ವೃತ್ತಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಸಮಸ್ಯೆ ಸೃಷ್ಟಿಯಾಗಿದೆ. ಅದಕ್ಕಾಗಿ ಮಂಗಳೂರು-ಪುತ್ತೂರು ವಿಭಾಗಕ್ಕೆ ತಕ್ಷಣವೇ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದಿದ್ದಾರೆ.

Also Read  ಮಂಗಳೂರು: ಅಕ್ರಮ ಕಳ್ಳಭಟ್ಟಿಗೆ ಕಡಿವಾಣ ➤ ಡಾ.ರಾಜೇಂದ್ರ ಕೆವಿ

error: Content is protected !!
Scroll to Top