‘ಜಲ್ಲಿಕಟ್ಟು’ ಮತ್ತು ಎತ್ತಿನಗಾಡಿ ಓಟದ ಸ್ಪರ್ಧೆಗಳಿಗೆ ಅವಕಾಶ ಪ್ರಶ್ನಿಸಿ ಅರ್ಜಿ ಸಲ್ಲಿಕೆ ➤ ಇಂದು ಸುಪ್ರೀಂ ಕೋರ್ಟ್ ತೀರ್ಪು ?

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.18. ತಮಿಳುನಾಡು ಮತ್ತು ಮಹಾರಾಷ್ಟ್ರದ ಸಾಂಪ್ರದಾಯಿಕ ಗೂಳಿ ಪಳಗಿಸುವ ಕ್ರೀಡೆ ‘ಜಲ್ಲಿಕಟ್ಟು’ ಮತ್ತು ಎತ್ತಿನಗಾಡಿ ಓಟದ ಸ್ಪರ್ಧೆಗಳಿಗೆ ಅವಕಾಶ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.

8 ಡಿಸೆಂಬರ್ 2022ರಂದು ಈ ವಿಷಯದ ವಿಚಾರಣೆಯನ್ನು ಪೂರ್ಣಗೊಳಿಸಿದ ನಂತರ ಸಂವಿಧಾನ ಪೀಠವು ತೀರ್ಪು ಕಾಯ್ದಿರಿಸಿತ್ತು. ಐದೂವರೆ ತಿಂಗಳ ನಂತರ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಈ ಬಗ್ಗೆ ಇಂದೇ ನಿರ್ಧಾರ ಹೊರಬರಲಿದೆ. ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

Also Read  ಆಟೋರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶುಭ ಸುದ್ದಿ ನೀಡಿದ ಕೇಂದ್ರ ಸರಕಾರ

 

error: Content is protected !!
Scroll to Top