ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆ ಜತೆ ಅಸಭ್ಯ ವರ್ತನೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.18. ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕನ್ಯಾನ ಗ್ರಾಮದ ಅಬೂಬಕ್ಕರ್‌ ಕೆ. (46) ಎಂದು ಗುರುತಿಸಲಾಗಿದೆ ಎಂದು ವಿಟ್ಲ ಪೊಲೀಸರು ತಿಳಿಸಿದ್ದಾರೆ.

ವಿಟ್ಲ ಕಸಬಾ ಗ್ರಾಮದ ಬನ ಎಂಬಲ್ಲಿ ಮೋಟಾರ್‌ ಸೈಕಲ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಮೋಟಾರ್‌ ಬೈಕ್‌ ನಿಲ್ಲಿಸಿ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದರೆನ್ನಲಾಗಿದ್ದು, ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಆರೋಪಿ ಕೆ. ಅಬೂಬಕ್ಕರ್‌ (46)ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Also Read  Breaking news ದೇರಳಕಟ್ಟೆ: ಅಟೊ ಮೊಬೈಲ್ ಅಂಗಡಿಗೆ ಬೆಂಕಿ

 

error: Content is protected !!
Scroll to Top