ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌ ➤ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಎಚ್ಚರಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.18. ಕರ್ನಾಟಕ ವಿಧಾನಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿರುವುದು ಕಂಡು ಬರುತ್ತಿದ್ದು, ಇಂತಹ ಪೋಸ್ಟ್‌ಗಳನ್ನು ಹಾಕುವ ಅಥವಾ ಫಾರ್ವರ್ಡ್‌ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಜಾತಿ, ಧರ್ಮ ಮತ್ತು ಪ್ರದೇಶ ಆಧಾರಿತವಾಗಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವಂತಹ ಮತ್ತು ವೈಯಕ್ತಿಕ ನಿಂದನೆ ಮಾಡುವಂತಹ ದ್ವೇಷಪೂರಿತ ಮತ್ತು ಪ್ರಚೋದನಾತ್ಮಕ ಪೋಸ್ಟ್‌ಗಳ ಮೇಲೆ ನಿಗಾ ಇಡಲು ಸೋಶಿಯಲ್‌ ಮೀಡಿಯಾ ಮಾನಿಟರಿಂಗ್‌ ಸೆಲ್‌ ರಚಿಸಲಾಗಿದೆ ಎಂದರು.

Also Read  ಕಡಬ: ಪರಿಸರದಲ್ಲಿ ಗುಡುಗು ಮಿಶ್ರಿತ ಭಾರೀ ಮಳೆ ➤ ಮಳೆಯಿಂದಾಗಿ ತಂಪಾದ ಇಳೆ

 

error: Content is protected !!
Scroll to Top