ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಖಾಸಗಿ ಬಸ್ ಗೆ ಬೆಂಕಿ

(ನ್ಯೂಸ್ ಕಡಬ)newskadaba.com ಕಟೀಲು, ಮೇ.18. ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ದೇವಸ್ಥಾನದ ಮುಂಭಾಗವೇ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಬಸ್ ನಲ್ಲಿ ಇಬ್ಬರ ಮಹಿಳೆಯರು ಮತ್ತು ಬಸ್ ಚಾಲಕ ಇದ್ದರು ಎಂದು ಹೇಳಲಾಗಿದ್ದು, ಮೂವರು ಬಸ್ ನಿಂದ ಇಳಿದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

error: Content is protected !!
Scroll to Top