ಕಂಬಳ ಬಗ್ಗೆ ಸುಪ್ರೀಂಕೋರ್ಟ್‌‌ನಿಂದ ಮಹತ್ವದ ತೀರ್ಪು ➤ ಕರಾವಳಿಗರಿಗೆ ಹರ್ಷ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.18. ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಇದರೊಂದಿಗೆ ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ-ತಡೆಗಳಿಲ್ಲದೆ ನಡೆಯಲಿದೆ.

ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ಸಂವಿಧಾನಪೀಠ ವಜಾಗೊಳಿಸಿದೆ.

Also Read  ಶತಮಾನದ ದೀಪ ದೇವರ ಪಾದ ಸೇರಿದೆ' ➤ ತಾಯಿಯ ಅಗಲಿಕೆಯ ಬಗ್ಗೆ ಪ್ರಧಾನಿ ಮೋದಿ ಟ್ವೀಟ್

 

error: Content is protected !!
Scroll to Top