(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.18. ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಹಾಗೂ ಏಕೈಕ ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣು ಗೋಪಾಲ್, ಮೇ 20ರಂದು (ಶನಿವಾರ) ಮಧ್ಯಾಹ್ನ 12:30ಕ್ಕೆ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಜೊತೆಗೆ ಕೆಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.