(ನ್ಯೂಸ್ ಕಡಬ)newskadaba.com ಯಲ್ಲಾಪುರ,ಮೇ.18 ಮದ್ಯದ ಬಾಕ್ಸ್‌ಗಳನ್ನು ತುಂಬಿ ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ತಾಲ್ಲೂಕಿನ ಆರ್ತಿಬೈಲ್ ಘಟ್ಟದಲ್ಲಿ ಪಲ್ಟಿಯಾಗಿ ಪಕ್ಕದ ಚರಂಡಿಗೆ ಉರುಳಿದ ಘಟನೆ ನಡೆದಿದೆ.ಲಾರಿ ಮದ್ಯದ ಬಾಟಲ್ ಇರುವ ಬಾಕ್ಸ್‌ಗಳನ್ನು ತುಂಬಿಕೊಂಡು ಕಲಬುರ್ಗಿಯಿಂದ ಉಡುಪಿಗೆ ಸಾಗುತ್ತಿತ್ತು.
ಪಲ್ಟಿಯಾದ ಕಾರಣ ಲಾರಿಯ ಮುಂಭಾಗ ಜಖಂ ಆಗಿದ್ದು, ಲಾರಿಯ ಚಾಲಕ ಮತ್ತು ಸಹಾಯಕನಿಗೆ ಅಲ್ಪ ಪ್ರಮಾಣದ ಪೆಟ್ಟಾಗಿದೆ. ಯಲ್ಲಾಪುರ ಪೊಲೀಸರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.
Also Read ಕುಕ್ಕೆ ಸುಬ್ರಹ್ಮಣ್ಯ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ನಾಳೆಯಿಂದ ಆರಂಭ