ಶಾಂತಿ ಕದಡುವವರ ವಿರುದ್ಧ ಗೂಂಡಾ ಕಾಯ್ದೆ ಹಾಕಿ ಗಡೀಪಾರು ಮಾಡಿ ► ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.17. ಸಮಾಜದಲ್ಲಿ ಮತೀಯವಾದಗಳ ಮೂಲಕ ಶಾಂತಿ ಕದಡುವವರನ್ನು ಗೂಂಡಾ ಕಾಯ್ದೆ ಹಾಕಿ ಗಡೀಪಾರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಯ್ಯ ಸೂಚನೆ ನೀಡಿದ್ದಾರೆ.

ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಆರಂಭವಾದ ಎರಡು ದಿನಗಳ ಪೊಲೀಸ್ ಹಿರಿಯ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿ, ಪೊಲೀಸರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದರೆ ಮಂಗಳೂರು ದೀಪಕ್‍ರಾವ್ ಮತ್ತು ಬಶೀರ್ ಅವರ ಕೊಲೆ ಪ್ರಕರಣಗಳನ್ನು ತಡೆಯಬಹುದಿತ್ತು ಎಂದರು. ಸಮಾಜದ ಶಾಂತಿ ಕದಡುವವರು ಯಾರೇ ಆದರೂ ಮುಲಾಜಿಲ್ಲದೆ ಕ್ರಮ ಜರುಗಿಸಿ. ಇನ್ಮುಂದೆ ಕೋಮು ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಘಟನೆ ನಡೆದರೆ ಅಂತಹ ಜಿಲ್ಲೆಗಳ ಹಿರಿಯ ಪೊಲೀಸ್ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು.

Also Read  ಇಂದು A.S.I ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಮೃತ್ಯು.!

error: Content is protected !!
Scroll to Top