ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ➤ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ

(ನ್ಯೂಸ್ ಕಡಬ)newskadaba.com ಹೊಸಕೋಟೆ,ಮೇ.19 ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ ಆಗುತ್ತಿದೆ, ಹಲವು ಕಡೆ ಗೂಂಡಾಗಿರಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.ಹೊಸಕೋಟೆ ಕ್ಷೇತ್ರ ದ ಡಿ ಶೆಟ್ಟಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೋತ್ಸವ ನೆಪದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ.

ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಖಂಡಿಸುತ್ತೆವೆ. ಪೊಲೀಸರು ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಬೇಕು. ಪೊಲೀಸರು ಖಾಕಿ ಹಾಕಿದ್ದಾರಾ ಅಥವಾ ಕಾಂಗ್ರೆಸ್ ಬಟ್ಟೆ ಹಾಕಿದ್ದಾರಾ. ಕಾಂಗ್ರೆಸ್ಸಿಗರು ಅಧಿಕಾರದ ಹಗ್ಗ ಜಗ್ಗಾಟದಲ್ಲಿ ಜನರ ಹಿತ ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Also Read  30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!

 

 

error: Content is protected !!
Scroll to Top