ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ..!

(ನ್ಯೂಸ್ ಕಡಬ)newskadaba.com ಕೊಡಗು,ಮೇ.19 ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ 2023-24 ನೇ ಸಾಲಿನ ಸೀಮಿತ ಅವಧಿಗೆ ಮಡಿಕೇರಿ, ಕೊಡ್ಲಿಪೇಟೆ ಹಾಗೂ ಶಾಂತಳ್ಳಿ ಹೋಬಳಿಗಳಿಗೆ ಸೇರಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಮೇ, 31 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರು, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ಶಬನಾ ಎಂ.ಶೇಖ್ ಅವರು ತಿಳಿಸಿದ್ದಾರೆ.

Also Read  ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ..!

error: Content is protected !!
Scroll to Top